TSK

TSK · ಙ್ಞಾನೋಕ್ತಿಗಳು 28:15

مراجع Treasury of Scripture Knowledge في ಕನ್ನಡ IRV.

العودة إلى المقطع

ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.

ಸಿಪಾಯಿಗಳಿಗೆ, “ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ.

ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ, ಆದುದರಿಂದ ಅವನು ಆ ಊರನ್ನು ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಯನ್ನು ಸೀಳಿಹಾಕಿಸಿದನು.

ಅವನು ಮೊರ್ದೆಕೈಯೊಬ್ಬನ ಮೇಲೆಯೇ ಕೈಯೆತ್ತುವುದು ಸಾಲದೆಂದೆಣಿಸಿ, ಇವನು ಯೆಹೂದ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಮೊರ್ದೆಕೈಯ ಬಂಧುಬಳಗದವರನ್ನು ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು.

ಯೆಹೋವನು ಆಳುತ್ತಿದ್ದ ದುಷ್ಟರ ಕೋಲನ್ನೂ, ಅರಸರ ದಂಡವನ್ನೂ ಮುರಿದುಬಿಟ್ಟನು.

ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ, ಅದು ದೇವರ ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.

ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.

ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.