ಅವನು ಸತ್ತವರಿಗೂ, ಬದುಕುವವರಿಗೂ ಮಧ್ಯದಲ್ಲಿ ನಿಂತುಕೊಂಡುದರಿಂದ ಆ ವ್ಯಾಧಿಯು ಶಮನವಾಯಿತು.
TSK
TSK · ಙ್ಞಾನೋಕ್ತಿಗಳು 29:8
مراجع Treasury of Scripture Knowledge في ಕನ್ನಡ IRV.
¶ ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನ ಪಾನಗಳನ್ನು ಬಿಟ್ಟು ನಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.
ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಉನ್ನತಿಗೆ ಬರುವುದು, ಕೆಟ್ಟವರ ಬಾಯಿಂದ ಕೆಡವಲ್ಪಡುವುದು.
ರಾಜನ ಕೋಪ ಮೃತ್ಯುವಿನ ದೂತ, ಜಾಣನು ಅದನ್ನು ಶಮನಪಡಿಸುವನು.
¶ ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!
ಅವು ದೇಶದ ಹುಲ್ಲನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು, “ಕರ್ತನಾದ ಯೆಹೋವನೇ, ಲಾಲಿಸು, ನನ್ನನ್ನು ಕ್ಷಮಿಸು. ಯಾಕೋಬ ಜನಾಂಗವು ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ” ಎಂದು ವಿಜ್ಞಾಪಿಸಿಕೊಂಡೆನು.
ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ,
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.