¶ ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,
TSK
TSK · ಙ್ಞಾನೋಕ್ತಿಗಳು 30:8
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.
ಜನರು ಪ್ರತಿದಿನ ಮುಂಜಾನೆಯಲ್ಲಿ ತಮ್ಮ ಭೋಜನಕ್ಕೆ ತಕ್ಕಷ್ಟು ಕೂಡಿಸಿಕೊಂಡರು. ಬಿಸಿಲು ಹೆಚ್ಚಾದಾಗ ಅದು ಕರಗಿಹೋಗುತ್ತಿತ್ತು.
¶ ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.
ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.
ತಪ್ಪಾದ ಮಾರ್ಗವನ್ನು ನನ್ನಿಂದ ದೂರಮಾಡು, ನಿನ್ನ ಧರ್ಮಶಾಸ್ತ್ರವನ್ನು ನನಗೆ ಅನುಗ್ರಹಿಸು.
ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಅದನ್ನು ಮಾಡಲಾರನು, ದುಷ್ಟನ ನಡತೆಯು ಹೇಸಿಕೆಗೂ, ನಾಚಿಕೆಗೂ ಆಸ್ಪದ.
ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.
ಪ್ರಸಂಗಿಯು ಹೀಗೆ ಹೇಳುತ್ತಾನೆ. “ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ.
ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.
ಅವನು ಸಾಯುವ ತನಕ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಬಾಬೆಲಿನ ಅರಸನಿಂದಲೇ ದೊರಕುತ್ತಿದ್ದವು.
‹ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.›
ಅನಂತರ ಆತನು ಸೇವಕರಿಗೆ, ‹“ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ”› ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು.
¶ ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.