TSK

TSK · ಙ್ಞಾನೋಕ್ತಿಗಳು 31:13

مراجع Treasury of Scripture Knowledge في ಕನ್ನಡ IRV.

العودة إلى المقطع

ಇಗೋ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ.

¶ ಅವನು ಅವರೊಂದಿಗೆ ಮಾತನಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು; ಆಕೆಯೇ ಅವುಗಳನ್ನು ಮೇಯಿಸುತ್ತಿದ್ದಳು.

ಮೋವಾಬ್ಯಳಾದ ರೂತಳು ನವೊಮಿಗೆ, “ನಾನು ಹೋಗಿ, ಹಕ್ಕಲ ತೆನೆಗಳನ್ನು ಆಯ್ದುಕೊಳ್ಳಲು ಅವಕಾಶ ಮಾಡಿಕೊಡುವವರ ಹೊಲದಿಂದ ತೆನೆಗಳನ್ನು ಸಂಗ್ರಹಿಸಿಕೊಂಡು ಬರುತ್ತೇನೆ” ಅಂದಳು. ಅದಕ್ಕೆ ನವೊಮಿ “ಹೋಗಿ ಬಾ ಮಗಳೆ” ಅಂದಳು.

¶ ಇದಲ್ಲದೆ ಯೆಹೋವನು ಹೀಗನ್ನುತ್ತಾನೆ, ಚೀಯೋನಿನ ಹೆಂಗಸರು ಅಹಂಕಾರವುಳ್ಳವರಾಗಿ, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ವಯ್ಯಾರವಾಗಿ ಹೆಜ್ಜೆ ಇಡುತ್ತಾ, ಕಾಲು ಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವುದರಿಂದ,

ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು.

ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ.

ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.