ಆದರೆ ಆಕೆಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ, ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ, ಹೇಳುತ್ತಿರಲಿಲ್ಲ” ಅಂದಳು.
TSK
TSK · ಙ್ಞಾನೋಕ್ತಿಗಳು 31:26
مراجع Treasury of Scripture Knowledge في ಕನ್ನಡ IRV.
ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬಳು ಹೆಂಗಸು ಅವರಿಗೆ, “ಕೇಳಿರಿ, ದಯವಿಟ್ಟು ಕೇಳಿರಿ. ಯೋವಾಬನೊಂದಿಗೆ ನಾನು ಮಾತನಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ” ಎಂದು ಕೂಗಿದಳು.
¶ ಎಸ್ತೇರಳ ಸೇವಕಿಯರೂ ಕಂಚುಕಿಗಳೂ ರಾಣಿಯಾದ ಆಕೆಯ ಬಳಿಗೆ ಬಂದು ಈ ವಿಚಾರವನ್ನು ತಿಳಿಸಿದಾಗ ಆಕೆಯು ಬಹಳವಾಗಿ ಕಳವಳಗೊಂಡು ಮೊರ್ದೆಕೈಗೆ ವಸ್ತ್ರಗಳನ್ನು ಕಳುಹಿಸಿ, “ಗೋಣಿತಟ್ಟನ್ನು ತೆಗೆದುಬಿಟ್ಟು, ಇವುಗಳನ್ನು ಧರಿಸಿಕೋ” ಎಂದು ಹೇಳಿಕಳುಹಿಸಿದಳು. ಆದರೆ ಅವನು ಅವುಗಳನ್ನು ಸ್ವೀಕರಿಸಲಿಲ್ಲ.
ಆಗ ಎಸ್ತೇರ್ ರಾಣಿಯು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ಸಮ್ಮತಿಸುವುದಾದರೆ ನನ್ನ ವಿಜ್ಞಾಪನೆಯನ್ನೂ, ಪ್ರಾರ್ಥನೆಯನ್ನೂ ಲಾಲಿಸಿ ನನ್ನ ಜೀವವನ್ನೂ ಮತ್ತು ನನ್ನ ಜನಾಂಗವನ್ನೂ ಉಳಿಸಬೇಕು.
ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು.
ಸವಿನುಡಿಯು ಜೇನುಕೊಡ, ಅದು ಆತ್ಮಕ್ಕೆ ಸಿಹಿ, ಎಲುಬಿಗೆ ಕ್ಷೇಮ.
ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು, ಮೃದುವಚನವು ಎಲುಬನ್ನು ಮುರಿಯುವುದು.
ಬಂಡೆಯ ಬಿರುಕುಗಳಲ್ಲಿಯೂ, ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ! ನಿನ್ನ ರೂಪವನ್ನು ನನಗೆ ತೋರಿಸು, ನಿನ್ನ ಧ್ವನಿಯನ್ನು ಕೇಳಿಸು; ಯಾಕೆಂದರೆ ನಿನ್ನ ಸ್ವರ ಎಷ್ಟೋ ಇಂಪು, ನಿನ್ನ ರೂಪವು ಎಷ್ಟೋ ಅಂದ.”
ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅಪವಾದದ ಮಾತುಗಳು ಬರಲಿಲ್ಲ. ಅವರು ಶಾಂತಿಯಿಂದಲೂ, ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹು ಜನರನ್ನು ಪಾಪದ ಕಡೆಯಿಂದ ತಿರುಗಿಸಿದರು.
¶ ಆಗ ಆಕೆಯು ಮಹಾಧ್ವನಿಯಿಂದ ಕೂಗಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು.
ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.
ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.
ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.