1 ಸಮುವೇಲನು 12:23
TSK
ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.
TSK
مراجع Treasury of Scripture Knowledge في ಕನ್ನಡ IRV.
ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.
ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು.
ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು, “ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.
ಅವೆಲ್ಲಾ ಗ್ರಹಿಕೆಯುಳ್ಳವನಿಗೆ ನ್ಯಾಯವಾಗಿಯೂ, ತಿಳಿವಳಿಕೆಯನ್ನು ಪಡೆದವರಿಗೆ ಯಥಾರ್ಥವಾಗಿಯೂ ತೋರುವವು.
¶ ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.