ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.
TSK
TSK · ಙ್ಞಾನೋಕ್ತಿಗಳು 4:26
مراجع Treasury of Scripture Knowledge في ಕನ್ನಡ IRV.
ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ, ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇಯದು!
ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು, ಅದು ಅವಳಿಗೆ ತಿಳಿದೇ ಇಲ್ಲ.
ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು, ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು.
ಕಂದಾ, ಕೇಳು, ಜ್ಞಾನವಂತನಾಗಿರು, ನಿನ್ನ ಮನಸ್ಸನ್ನು ಜ್ಞಾನದ ಮಾರ್ಗದಲ್ಲಿ ಮುಂದೆ ನಡೆಯಿಸು.
ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.
¶ ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.
ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.
ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.