¶ “ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.
TSK
TSK · ಙ್ಞಾನೋಕ್ತಿಗಳು 5:22
مراجع Treasury of Scripture Knowledge في ಕನ್ನಡ IRV.
ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.
ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, ಹಾಳು ಗುಂಡಿಯ ಮೇಲೆ ನಡೆಯುವನು.
ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.
ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ.
ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ, ವಂಚಕರಿಗೆ ವಕ್ರತೆಯು ನಾಶನ.
ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.
ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.
“ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?
ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ. ಅವಳ ಹೃದಯವು ಉರುಲುಗಳೂ, ಬಲೆಗಳೂ, ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.
ಆತನ ಕೈ, ನನ್ನ ದ್ರೋಹಗಳನ್ನು ನನ್ನ ಮೇಲೆ ನೊಗವು ಇರುವಂತೆ ನನ್ನನ್ನು ಬಿಗಿದಿದೆ. ಆ ದ್ರೋಹಗಳು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.
¶ ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ. ಎದೋಮೇ, ನೀನು ಮಾಡಿದ್ದೇ ನಿನಗಾಗುವುದು. ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವುದು.
¶ ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,
ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.