TSK

TSK · ಙ್ಞಾನೋಕ್ತಿಗಳು 9:6

مراجع Treasury of Scripture Knowledge في ಕನ್ನಡ IRV.

العودة إلى المقطع

ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು.

ನಾನು ಜ್ಞಾನಮಾರ್ಗವನ್ನು ಉಪದೇಶಿಸಿ, ಧರ್ಮಮಾರ್ಗದಲ್ಲಿ ನಿನ್ನನ್ನು ನಡೆಸುವೆನು.

ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಅವನು ಯೆಹೋವನ ದಯೆಗೆ ಗುರಿಯಾಗುವನು.

ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.

¶ ‹“ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.›

ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ” ಎಂದು ಅವರನ್ನು ಎಚ್ಚರಿಸಿದನು.

¶ ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.