TSK

TSK · ಙ್ಞಾನೋಕ್ತಿಗಳು 9:8

مراجع Treasury of Scripture Knowledge في ಕನ್ನಡ IRV.

العودة إلى المقطع

¶ “‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.

¶ ಆಗ ನಾತಾನನು ದಾವೀದನನ್ನು ನೋಡಿ, “ಆ ಮನುಷ್ಯನು ನೀನೇ. ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೇಳುವುದೇನೆಂದರೆ, ‘ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರಿಗೆ ಅರಸನನ್ನಾಗಿ ಮಾಡಿದವನು, ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ.

¶ ಅನಂತರ ಅರಸನಾದ ದಾವೀದನು ತನ್ನ ಸೇವಕರಿಗೆ, “ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನು ಕರೆಯಿರಿ” ಎಂದು ಆಜ್ಞಾಪಿಸಿದನು. ಅವರು ಅರಸನ ಸನ್ನಿಧಿಗೆ ಬಂದರು.

ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.

ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ, ಗದರಿಕೆಯನ್ನು ಗಮನಿಸುವವನಿಗೆ ಮಾನ.

ಮುಖಸ್ತುತಿ ಮಾಡುವವನಿಗಿಂತಲೂ, ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು.

¶ ‹“ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.›

¶ ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.

ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.