TSK

TSK · ಕೀರ್ತನೆಗಳು 116:13

مراجع Treasury of Scripture Knowledge في ಕನ್ನಡ IRV.

العودة إلى المقطع

ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ.

ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.

ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.

¶ ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ, ‹“ಇದನ್ನು ತೆಗೆದುಕೊಂಡು ಹಂಚಿಕೊಂಡು ಕುಡಿಯಿರಿ.›

ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?

ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, ‹“ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ”› ಅಂದನು.