TSK

TSK · ಕೀರ್ತನೆಗಳು 21:12

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ನೆಮ್ಮದಿಯಿಂದಿದ್ದಾಗ ಆತನು ನನ್ನನ್ನು ಒಡೆದು ಹಾಕಿದನು; ಕತ್ತುಹಿಡಿದು ನನ್ನನ್ನು ಚೂರು ಚೂರು ಮಾಡಿದನು. ಬಾಣ ಪ್ರಯೋಗಿಸಲು ನನ್ನನ್ನು ಗುರಿಮಾಡಿಕೊಂಡಿದ್ದಾನೆ.

ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ.

ನನ್ನ ಶತ್ರುಗಳು ನನಗೆ ಬೆನ್ನುಕೊಟ್ಟು ಓಡುವಂತೆ ಮಾಡಿದ್ದೀ; ನನ್ನ ಹಗೆಯವರನ್ನು ನಾನು ನಿರ್ಮೂಲಮಾಡುವೆನು.

ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; ದೇವರು ನನ್ನ ಸಂಗಡ ಇರುವುದು ನಿಶ್ಚಯ.

ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.