TSK

TSK · ಕೀರ್ತನೆಗಳು 78:21

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.

¶ ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೆ ಬಾಗಿಲುಗಳಲ್ಲಿ ನಿಂತು ಕಣ್ಣೀರಿಟ್ಟು ಅಳುವ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಅವರ ಗುಣುಗುಟ್ಟುವಿಕೆಯಿಂದ ಮೋಶೆಗೆ ಬೇಸರವಾಯಿತು.

ದೇವರ ಕೋಪವು ಅವರಿಗೆ ವಿರುದ್ಧವಾಗಿ ಎದ್ದು, ಅವರಲ್ಲಿ ಕೊಬ್ಬಿದವರನ್ನು ವಧಿಸಿ, ಇಸ್ರಾಯೇಲರ ಪ್ರಾಯಸ್ಥರನ್ನು ನೆಲಕ್ಕುರುಳಿಸಿತು.

ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು.