TSK

TSK · ಕೀರ್ತನೆಗಳು 92:13

مراجع Treasury of Scripture Knowledge في ಕನ್ನಡ IRV.

العودة إلى المقطع

ಇದಲ್ಲದೆ ಯಾಜಕರ ಪ್ರಾಕಾರವನ್ನೂ, ಮಹಾಪ್ರಾಕಾರವನ್ನೂ, ಮಹಾಪ್ರಾಕಾರಕ್ಕೆ ಬಾಗಿಲುಗಳನ್ನೂ ಮಾಡಿಸಿದನು; ಅವುಗಳ ಬಾಗಿಲುಗಳನ್ನು ತಾಮ್ರದ ತಗಡಿನಿಂದ ಹೊದಿಸಿದನು.

ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ.

ಯೆಹೋವನ ಮಂದಿರದಲ್ಲಿಯೂ, ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ, ಆತನನ್ನು ಕೀರ್ತಿಸಿರಿ.

ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲಿಟ್ಟ ಚಂದ್ರಕಾಂತ ಸ್ತಂಭಗಳು; ದೇವದಾರುಗಳಷ್ಟು ರಮಣೀಯವಾದ ಅವನ ಗಾಂಭೀರ್ಯವು ಲೆಬನೋನಿಗೆ ಸಮಾನ.

ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.

ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.

ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.