ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ತಲುಪುವವರೆಗೂ ಯೆಹೋವನು ಅವರ ಮೇಲೆ ಆಕಾಶದಿಂದ ದೊಡ್ಡ ಆಲಿಕಲ್ಲಿನ ಮಳೆಯನ್ನು ಸುರಿಸಿದನು. ಈ ಕಾರಣದಿಂದ ಅನೇಕರು ಸತ್ತರು ಇಸ್ರಾಯೇಲ್ಯರ ಕತ್ತಿಯಿಂದ ಸಂಹಾರವಾದವರಿಗಿಂತ ಆಲಿಕಲ್ಲಿನ ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.
TSK
TSK · ಪ್ರಕಟನೆ 16:21
مراجع Treasury of Scripture Knowledge في ಕನ್ನಡ IRV.
ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು ತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.
ಆದಕಾರಣ, ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ, ‘ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವುದು.’
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಪ್ರತಿಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರುದ್ಧವಾಗಿರುವುದು.
¶ ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.
ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ.