TSK

TSK · ಪ್ರಕಟನೆ 21:11

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು.

ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.

ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.

¶ “‘ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದೆ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಅಪವಿತ್ರನೆಂದು ತಳ್ಳಿಬಿಟ್ಟೆನು; ಹೌದು, ನೆರಳು ನೀಡುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.

¶ ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ “ಯೆಹೋವನ ನೆಲೆ” ಎಂದು ಹೆಸರಾಗುವುದು.

ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.

ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲ್ಪಟ್ಟಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.

¶ ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,