TSK

TSK · ಪ್ರಕಟನೆ 21:12

مراجع Treasury of Scripture Knowledge في ಕನ್ನಡ IRV.

العودة إلى المقطع

“ಇಸ್ರಾಯೇಲರೆಲ್ಲರೂ ಒಬ್ಬೊಬ್ಬರಾಗಿ ಕುಟುಂಬದ ಗುರುತುಗಳ ಪ್ರಕಾರ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರದಲ್ಲಿ ಹಾಕಿಕೊಳ್ಳಬೇಕು. ಅವರು ದೇವದರ್ಶನದ ಗುಡಾರದ ಎದುರಿನಲ್ಲಿ ಇಳಿದುಕೊಳ್ಳಬೇಕು.”

ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ, ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.

ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು.

ನಿನ್ನ ಶಿಖರಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ, ನಿನ್ನ ಪೌಳಿಗೋಡೆಯನ್ನು ಮನೋಹರ ರತ್ನಗಳಿಂದ ನಿರ್ಮಿಸುವೆನು.

¶ ಪಟ್ಟಣದ ಬಾಗಿಲುಗಳಿಗೆ ಇಸ್ರಾಯೇಲಿನ ಕುಲಗಳ ಆಯಾ ಹೆಸರುಗಳು ಇರಲಿ; ಉತ್ತರಕ್ಕೆ ಮೂರು ಬಾಗಿಲುಗಳು; ಒಂದು ರೂಬೇನ್ ಬಾಗಿಲು, ಇನ್ನೊಂದು ಯೆಹೂದ ಬಾಗಿಲು, ಮತ್ತೊಂದು ಲೇವಿಯರ ಬಾಗಿಲು.

‹ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ”› ಅಂದನು.

ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.

ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ.

ಅದರ ಹೆಬ್ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವುದೇ ಇಲ್ಲ. ಅಲ್ಲಿ ರಾತ್ರಿಯಂತೂ ಇಲ್ಲವೇ ಇಲ್ಲ.