¶ “ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?
TSK
TSK · ಪ್ರಕಟನೆ 21:22
مراجع Treasury of Scripture Knowledge في ಕನ್ನಡ IRV.
ಆದರೆ ದೇವರು ನಿಜವಾಗಿ ಮನಷ್ಯರೊಡನೆ ಭೂಲೋಕದಲ್ಲಿ ವಾಸವಾಗಿರುವನೋ? ಸ್ವರ್ಗವೂ, ಸ್ವರ್ಗಾಧಿ ಸ್ವರ್ಗವೂ ನಿನ್ನ ವಾಸಕ್ಕೆ ಸಾಲವು, ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಆಲಯವು ನಿನಗೆ ಹೇಗೆ ಸಾಕಾದೀತು?
ಅದಕ್ಕೆ ಯೇಸು ‹“ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು”› ಎಂದು ಉತ್ತರಕೊಟ್ಟನು.
‹ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ.›
‹ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನು›‹ತನ್ನಲ್ಲಿ ಮಹಿಮೆಪಡಿಸುವನು. ತಕ್ಷಣವೇ ಮಹಿಮೆಪಡಿಸುವನು.›
ದೇವರ ಸರ್ವಸಂಪೂರ್ಣತೆಯು ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ,
¶ “ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.
¶ ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.
ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.
ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.