TSK

TSK · ಪ್ರಕಟನೆ 21:24

مراجع Treasury of Scripture Knowledge في ಕನ್ನಡ IRV.

العودة إلى المقطع

ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.

ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.

ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.

ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ,

ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.

ಆಕೆಯ ನಿಮಿತ್ತ ದುಃಖಿಸುವವರೇ, ನೀವೆಲ್ಲರೂ, ಆಕೆಯ ಸಮಾಧಾನದ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು ಎಂದುಕೊಳ್ಳುವಿರಿ. ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ.

‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.

ಹೀಗೆ ಬಹು ದೇಶಗಳವರೂ, ಬಲವಾದ ಜನಾಂಗಗಳವರೂ ಯೆರೂಸಲೇಮಿನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ ಬರುವರು.”

ಜನಾಂಗಗಳ ವೈಭವವೂ ಗೌರವವೂ ಅಲ್ಲಿಗೆ ತರಲ್ಪಡುವವು.