TSK

TSK · ರೋಮಾಪುರದವರಿಗೆ 1:13

مراجع Treasury of Scripture Knowledge في ಕನ್ನಡ IRV.

العودة إلى المقطع

ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.”

‹ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು›

ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.

¶ ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,

ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.

ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು.

ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೋ ಅಪೊಸ್ತಲನಾಗಿದ್ದೇನೆ. ನಾನು ಕರ್ತನ ಅಪೊಸ್ತಲನಾಗಿದ್ದೇನೆಂಬುದಕ್ಕೆ ನೀವೇ ನನ್ನ ಮುದ್ರೆಯಾಗಿದ್ದಿರಿ.

¶ ಸಹೋದರರೇ ಪವಿತ್ರಾತ್ಮನಿಂದುಂಟಾಗುವ ವರಗಳನ್ನು ಕುರಿತು ನಿಮಗೆ ತಿಳಿವಳಿಕೆಯಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.

¶ ನಾನು ಇಂಥ ಭರವಸವುಳ್ಳವನಾಗಿದ್ದರಿಂದ ನೀವು ಎರಡನೆಯ ಸಾರಿ ಕೃಪಾರ್ಶೀವಾದವನ್ನು ಪಡೆದುಕೊಳ್ಳುವಂತೆ ನಿಮ್ಮ ಬಳಿಗೆ ಮೊದಲೇ ಬರಬೇಕೆಂದಿದ್ದೆನು.

ನಾವಾದರೋ ನಮ್ಮ ಯೋಗ್ಯತೆಗೆ ಮೀರಿ ಹೊಗಳಿಕೊಳ್ಳದೇ ದೇವರು ನಮಗೆ ನೇಮಿಸಿರುವಂಥ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಈ ಮೇರೆಯೊಳಗಿದ್ದು ನಿಮ್ಮ ತನಕ ಬಂದಿದ್ದೇವೆ.

ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.

¶ ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.

¶ ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.

ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.