TSK

TSK · ರೋಮಾಪುರದವರಿಗೆ 1:24

مراجع Treasury of Scripture Knowledge في ಕನ್ನಡ IRV.

العودة إلى المقطع

¶ “‘ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ.

ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ.

ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;

¶ “ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.

¶ ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.

ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.

ದೇವರನ್ನರಿಯದ ಅನ್ಯಜನರಂತೆ ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು.

¶ ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ.