¶ ಬೆನ್ಯಾಮೀನ್ ಕುಲದವರ ವಿಷಯದಲ್ಲಿ, “ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವುದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು” ಎಂದು ಹೇಳಿದನು.
TSK
TSK · ರೋಮಾಪುರದವರಿಗೆ 1:7
مراجع Treasury of Scripture Knowledge في ಕನ್ನಡ IRV.
ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.
‹ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಅಗತ್ಯವೆಂಬುದು ಆತನಿಗೆ ತಿಳಿದಿದೆ.›
¶ ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು, ಅವನು ಕರ್ತನ ಹೆಸರನ್ನು ಹೇಳಿ, “ಕರ್ತನಾದ, ಯೇಸುವೇ, ನನ್ನಾತ್ಮವನ್ನು ಸೇರಿಸಿಕೋ” ಎಂದು ಪ್ರಾರ್ಥಿಸಿ,
ಯೇಸು ಕ್ರಿಸ್ತನಲ್ಲಿ ಸೇರುವುದಕ್ಕೆ ಕರೆಯಲ್ಪಟ್ಟ ನೀವೂ ಸಹ ಆ ಅನ್ಯಜನರೊಳಗಿನವರಾದ್ದರಿಂದ ನಿಮಗೆ,
ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.
ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,
¶ ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲಿ ಇರುವ ದೇವಜನರೆಲ್ಲರಿಗೂ ಬರೆಯುವುದೇನಂದರೆ,
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, ದೇವರ ಪ್ರೀತಿಯೂ, ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.
ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
¶ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ.
ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್.
ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ.
ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.
ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧರಾಗಿರುವುದಕ್ಕೆ ಕರೆದನು.
ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,
¶ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ.
ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ, ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ, ತಮ್ಮ ಸೇವೆಯ ಫಲವನ್ನು ಹೊಂದುವವರು, ನಂಬಿಗಸ್ತರು, ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಇನ್ನು ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು.
¶ ಕರ್ತನು ನಿನ್ನ ಆತ್ಮದೊಂದಿಗೆ ಇರಲಿ. ಆತನ ಕೃಪೆಯು ನಿಮ್ಮೊಂದಿಗಿರಲಿ.
ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಆಗಲಿ.
¶ ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”
ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.
¶ ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.
¶ ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,
¶ ‹“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ,›‹ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು›‹ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,›
¶ ‹“ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ,›‹ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ,›
‹ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.›
¶ ‹“ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ,›‹ದೇವರ ಸೃಷ್ಟಿಗೆ ಮೂಲನೂ ಆಗಿರುವ›‹‘ಆಮೆನ್’ ಎಂಬಾತನು›‹ಹೇಳುವುದೇನಂದರೆ,›
¶ ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!