TSK

TSK · ರೋಮಾಪುರದವರಿಗೆ 11:33

مراجع Treasury of Scripture Knowledge في ಕನ್ನಡ IRV.

العودة إلى المقطع

ಈ ಸಂಗತಿಯು ಮೊರ್ದೆಕೈಗೆ ಗೊತ್ತಾದಾಗ ಅವನು ಅದನ್ನು ಎಸ್ತೇರ್ ರಾಣಿಗೆ ತಿಳಿಸಿದನು. ಆಕೆಯು ಅವನ ಹೆಸರನ್ನು ಅರಸನಿಗೆ ಹೇಳಿ ಆ ಸಂಗತಿಯನ್ನು ತಿಳಿಸಿದಳು.

ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.

ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?

ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?”

ಆತನಿಗೆ ಹೇಳತಕ್ಕದ್ದನ್ನು ನಮಗೆ ನೀನೇ ತಿಳಿಸು, ಅಂಧಕಾರವು ನಮ್ಮನ್ನು ಕವಿದಿರುವುದರಿಂದ ಏನೂ ಮಾತನಾಡಲು ಸಾಧ್ಯವಿಲ್ಲ.

ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.

ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.

ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.

ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.

ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.

ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ.

ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.

ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ,

ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.