ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ಗಮನಿಸಿದ್ದೀರಿ. ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದ್ದಾನೆ.
TSK
TSK · ರೋಮಾಪುರದವರಿಗೆ 11:4
مراجع Treasury of Scripture Knowledge في ಕನ್ನಡ IRV.
ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.
ಆದುದರಿಂದ, ನೀವು ಬಾಳ್ ದೇವತೆಯ ಆರಾಧಕರಾದ ಎಲ್ಲಾ ಪ್ರವಾದಿಗಳನ್ನೂ, ಭಕ್ತರನ್ನೂ, ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನೂ ಬಾಳ್ ದೇವತೆಗೋಸ್ಕರ ಸರ್ವಾಂಗಯಜ್ಞವನ್ನು ಸಮರ್ಪಿಸಬೇಕೆಂದಿದ್ದೇನೆ, ಆದುದರಿಂದ ಅವರಲ್ಲಿ ಒಬ್ಬನೂ ಈ ಕಾರ್ಯಕ್ಕೆ ಬಾರದಿರಕೂಡದು, ಬಾರದವನು ಸಾಯಬೇಕು” ಎಂದು ಹೇಳಿದನು. ಯೇಹುವು ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.
ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.
¶ “ನಾನು ಯೆಹೂದದ ಮೇಲೂ ಮತ್ತು ಯೆರೂಸಲೇಮಿನವರೆಲ್ಲರ ಮೇಲೂ ಕೈಯೆತ್ತಿ, ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ, ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮ ಮಾಡುವೆನು,