¶ ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಿದ್ದಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ. ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾವಿಧಿಗಳನ್ನು, ಧರ್ಮನಿಯಮಗಳನ್ನು ಅನುಸರಿಸುವುದಿಲ್ಲ.
TSK
TSK · ರೋಮಾಪುರದವರಿಗೆ 11:8
مراجع Treasury of Scripture Knowledge في ಕನ್ನಡ IRV.
2 ಅರಸುಗಳು 17:34
TSK
ಯೆಶಾಯ 6:9
TSK
ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,
ಯೆರೆಮಿಯ 5:21
TSK
ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,
ಮತ್ತಾಯನು 13:13
TSK
‹ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ.›
ಲೂಕನು 8:10
TSK
ಆತನು, ‹“ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.›
ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.