TSK

TSK · ರೋಮಾಪುರದವರಿಗೆ 12:11

مراجع Treasury of Scripture Knowledge في ಕನ್ನಡ IRV.

العودة إلى المقطع

ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ.

ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.

“ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ತಿರುಗಾಡುತ್ತಿದೆ” ಎಂಬುದು ಸೋಮಾರಿಯ ನೆವ.

ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.

‹ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?›

ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ.

ಯಾವನಾದರೂ ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನಾಗಿದ್ದಾನೆ. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದಾಗ ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.

¶ ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.

¶ ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ.

ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟಿರುವ ಪ್ರಕಾರ ನೀವು ಮತ್ತೊಬ್ಬರ ವಿಷಯದಲ್ಲಿ ತಲೆಹಾಕದೆ ಸುಮ್ಮಗಿದ್ದು, ಸ್ವಂತ ಕಾರ್ಯಗಳನ್ನೇ ನೋಡಿಕೊಳ್ಳುತ್ತಾ, ಕೈಯಾರೆ ಕೆಲಸಮಾಡಿ ದುಡಿಯಿರಿ.

ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.

ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.

ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.

ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.

‹ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು.›