TSK

TSK · ರೋಮಾಪುರದವರಿಗೆ 12:6

مراجع Treasury of Scripture Knowledge في ಕನ್ನಡ IRV.

العودة إلى المقطع

‹ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.›

‹ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’›

¶ ಅ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.

ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.

ಅವನಿಗೆ ಕನ್ಯೆಯರಾದ ನಾಲ್ಕುಮಂದಿ ಹೆಣ್ಣು ಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.

¶ ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.

¶ ಪ್ರಿಯರೇ, ನಾನು ನಿಮಗೋಸ್ಕರವಾಗಿ ನನ್ನಗೂ ಅಪೊಲ್ಲೋಸನಿಗೂ ಈ ನಿಯಮಗಳನ್ನೆಲ್ಲಾ ಅನ್ವಯಿಸಿಕೊಂಡು ಹೇಳಿದ್ದೇನೆ. ಆದ್ದರಿಂದ ನೀವು “ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಿಹೋಗಬಾರದು,” ಎಂಬ ಈ ವಾಕ್ಯದ ಅರ್ಥವನ್ನು ನಮ್ಮಿಂದ ಕಲಿತುಕೊಂಡು, ನಿಮ್ಮಲ್ಲಿ ಯಾವನಾದರೂ ಒಬ್ಬನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದು ಎಂಬುದಕ್ಕಾಗಿದೆ.

ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ.

ಆದರೆ ಪ್ರವಾದಿಸುವವನಾದರೋ, ಅವನ ಮಾತುಗಳಿಂದ ಭಕ್ತಿವೃದ್ಧಿಯನ್ನೂ, ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುವವು.

ಇಬ್ಬರು ಮೂವರು ಪ್ರವಾದಿಗಳು ಮಾತನಾಡಲಿ, ಮಿಕ್ಕಾದವರು ವಿವೇಚನೆಯಿಂದ ಕೇಳಲಿ.

ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.

ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.