TSK

TSK · ರೋಮಾಪುರದವರಿಗೆ 13:6

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆ ಕಾಲದಲ್ಲಿ ನಾನು ನಿಮ್ಮ ಸಂಗಡ ಮಾತನಾಡಿ, “ನಿಮ್ಮ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ.

¶ ದಮಸ್ಕದ ಅರಾಮ್ಯರು, ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.

ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.

ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತ್ಯಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕು.

ಊರ ಮುಂದಿನ ಚಾವಡಿಗೆ ಹೋದಾಗಲೂ, ಚೌಕದಲ್ಲಿ ಆಸನವನ್ನು ಹಾಕಿಸಿಕೊಂಡಾಗಲೂ

ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.

ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.

ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.