TSK

TSK · ರೋಮಾಪುರದವರಿಗೆ 14:1

مراجع Treasury of Scripture Knowledge في ಕನ್ನಡ IRV.

العودة إلى المقطع

ಇಗೋ, ನೀನು ಅನೇಕರನ್ನು ಶಿಕ್ಷಿಸಿ, ಜೋಲು ಬಿದ್ದ ಕೈಗಳನ್ನು ಬಲಗೊಳಿಸಿದ್ದಿ.

ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.

ನೀವು ದುರ್ಬಲವಾದವುಗಳನ್ನು ಬಲಗೊಳಿಸುವುದಿಲ್ಲ, ರೋಗದವುಗಳನ್ನು ಸ್ವಸ್ಥಮಾಡುವುದಿಲ್ಲ, ಮುರಿದ ಅಂಗಗಳನ್ನು ಕಟ್ಟುವುದಿಲ್ಲ, ಕಳೆದು ಹೋದವುಗಳನ್ನು ಹುಡುಕುವುದಿಲ್ಲ, ಓಡಿಸಿದನ್ನು ನೀವು ಹಿಂದಕ್ಕೆ ತರುವುದಿಲ್ಲ, ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.

ಇಗೋ, ದೇಶದಲ್ಲಿ ನಾನು ಒಬ್ಬ ಕುರುಬನನ್ನು ನೇಮಿಸುವೆನು; ಅವನು ಹಾಳಾಗುತ್ತಿರುವ ಕುರಿಗಳನ್ನು ನೋಡಿಕೊಳ್ಳನು, ಚದುರಿದವುಗಳನ್ನು ಹುಡುಕನು, ಊನವಾದವುಗಳನ್ನು ಗುಣಪಡಿಸನು, ನೆಟ್ಟಗಿರುವವುಗಳನ್ನು ಸಾಕನು; ಕೊಬ್ಬಿದವುಗಳ ಮಾಂಸವನ್ನು ತಿನ್ನುವನು, ಕುರಿಗಳ ಗೊರಸುಗಳನ್ನು ಚೂರುಚೂರು ಮಾಡುವನು.

ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು.

‹ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ.›

‹ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು.›

ಅವನು ಹೆಚ್ಚು ಕಡಿಮೆ ನೂರು ವರ್ಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.

¶ ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು.

¶ ಆದರೆ ಸಹೋದರರೇ ನಾನಂತೂ ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು.

ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲರಂತಾದೆನು.

ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.