ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.
TSK
TSK · ರೋಮಾಪುರದವರಿಗೆ 14:18
مراجع Treasury of Scripture Knowledge في ಕನ್ನಡ IRV.
‹ಅದು›‹ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ”› ಎಂದು ನಾನು ನಿಮಗೆ ಹೇಳುತ್ತಿದ್ದೇನೆ.
ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.
¶ ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.
ಯಾವನಾದರೂ ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನಾಗಿದ್ದಾನೆ. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದಾಗ ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
¶ ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.
ಯಾಕೆಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡುವುದು ನಮ್ಮ ಉದ್ದೇಶ.
ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.
ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ.
ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.