TSK

TSK · ರೋಮಾಪುರದವರಿಗೆ 14:19

مراجع Treasury of Scripture Knowledge في ಕನ್ನಡ IRV.

العودة إلى المقطع

ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.

‹ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.›

ಆದರೆ ಕ್ರಿಸ್ತ ನಂಬಿಕೆಯಿಲ್ಲದ ಸಂಗಾತಿಯು ಅಗಲಬೇಕೆಂದಿದ್ದರೆ ಅಗಲಿಹೋಗಲಿ ಇಂಥಾ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.

ಹಾಗೆಯೇ ನೀವು ಆತ್ಮೀಕವಾದ ವರಗಳಿಗಾಗಿ ಅತ್ಯಾಸಕ್ತಿಯುಳ್ಳವರಾಗಿರುವುದರಿಂದ ಸಭೆಗೆ ಹೆಚ್ಚಿನ ಅಭಿವೃದ್ಧಿ ಉಂಟಾಗುವ ಹಾಗೆ ತವಕಪಡಿರಿ.

ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುತ್ತಿರುವವರೆಂದು ಭಾವಿಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ, ನಾವು ಕ್ರಿಸ್ತನಲ್ಲಿದ್ದು ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಮಾತನಾಡುವವರಾಗಿದ್ದೇವೆ.

ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.

¶ ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ,

ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.

¶ ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.

¶ ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.