TSK

TSK · ರೋಮಾಪುರದವರಿಗೆ 14:2

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ

ದ್ವೇಷವಿರುವಲ್ಲಿ ಮೃಷ್ಟಾನ್ನಕ್ಕಿಂತಲೂ, ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ.

ಅಂದಿನಿಂದ ವಿಚಾರಕನು ಅವರಿಗೆ ನೇಮಕವಾದ ಭೋಜನ ಪದಾರ್ಥಗಳನ್ನೂ, ಅವರು ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದಿಟ್ಟು ಕಾಯಿಪಲ್ಯಗಳನ್ನು ಕೊಡುತ್ತಾ ಬಂದನು.

ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ಅದು ನಿನ್ನ ಮಟ್ಟಿಗೆ ಮಾತ್ರ ಇರಲಿ. ತಾನು ಒಪ್ಪಿದ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು.

ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.

¶ ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ.

ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.