ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.
TSK
TSK · ರೋಮಾಪುರದವರಿಗೆ 15:3
مراجع Treasury of Scripture Knowledge في ಕನ್ನಡ IRV.
ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.
‹ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ›‹ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?›
ತಿರುಗಿ ಎರಡನೇ ಸಾರಿ ಹೋಗಿ, ‹“ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ”› ಎಂದು ದೇವರನ್ನು ಪ್ರಾರ್ಥಿಸಿದನು.
¶ ‹“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.›
‹ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ”› ಎಂದನು.
‹ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ›‹ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.›
‹ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ›
ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.