TSK

TSK · ರೋಮಾಪುರದವರಿಗೆ 15:32

مراجع Treasury of Scripture Knowledge في ಕನ್ನಡ IRV.

العودة إلى المقطع

ಸುಗ್ಗೀಕಾಲದಲ್ಲಿ ಹಿಮದ ಶೀತವು ಹೇಗೋ ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ.

¶ ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.

ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು.

ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ.

ಆದರೆ ಕರ್ತನ ಚಿತ್ತವಾದರೆ ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ.

¶ ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.

¶ ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ.

ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು.

ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು “ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು.