¶ ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;
TSK
TSK · ರೋಮಾಪುರದವರಿಗೆ 16:5
مراجع Treasury of Scripture Knowledge في ಕನ್ನಡ IRV.
ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.
ಕರ್ತನಲ್ಲಿ ನನ್ನ ಪ್ರಿಯನಾದ ಅಂಪ್ಲಿಯಾತನಿಗೆ ವಂದನೆ.
ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದು ಹಾಗೂ ಅವರು ದೇವಜನರ ಸೇವೆಗೋಸ್ಕರ ತಮ್ಮನ್ನು ಅರ್ಪಿಸಿದ್ದಾರೆಂದು ನೀವು ಬಲ್ಲವರಾಗಿದ್ದೀರಿ.
¶ ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲಿ ಇರುವ ದೇವಜನರೆಲ್ಲರಿಗೂ ಬರೆಯುವುದೇನಂದರೆ,
ಲವೊದಿಕೀಯದಲ್ಲಿರುವ ಸಹೋದರರಿಗೂ ಮತ್ತು ನುಂಫಳಿಗೂ ಹಾಗೂ ಆಕೆಯ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ವಂದನೆ ಹೇಳಿರಿ.
ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.
ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.