ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.
TSK
TSK · ರೋಮಾಪುರದವರಿಗೆ 16:7
مراجع Treasury of Scripture Knowledge في ಕನ್ನಡ IRV.
‹ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ.›
‹ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.›
ನನ್ನ ಸಂಬಂಧಿಕನಾದ ಹೆರೂಡಿಯೋನನಿಗೆ ವಂದನೆ. ನಾರ್ಕಿಸ್ಸನ ಮನೆಯವರೊಳಗೆ ಕ್ರಿಸ್ತನನ್ನು ನಂಬಿದವರಿಗೆ ವಂದನೆಗಳು.
ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.
ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.
ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.
¶ ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ.
ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು.
¶ ನನ್ನ ಜೊತೆ ಸೆರೆಯವನಾದ ಅರಿಸ್ತಾರ್ಕನೂ ಮತ್ತು ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ.
ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆ ಮತ್ತು ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ತಿಳಿದುಕೊಳ್ಳುತ್ತೇವೆ.
¶ ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.