TSK

TSK · ರೋಮಾಪುರದವರಿಗೆ 2:15

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ಹೇಳಿದನು. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯಥಾರ್ಥ ಮನಸ್ಸಿನಿಂದಲೂ, ಶುದ್ಧ ಹಸ್ತದಿಂದಲೂ ಇದನ್ನು ಮಾಡಿದೆನು” ಎಂದನು.

ಇದಲ್ಲದೆ ಅರಸನು ಶಿಮ್ಮೀಗೆ ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಮಾಡಿದ ಪಾಪಕ್ಕೆ ನಿನ್ನ ಮನವೇ ಸಾಕ್ಷಿ. ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು.

ನೀನು ಕೂಡ ಅನೇಕ ವೇಳೆ ಇತರರನ್ನು ಶಪಿಸಿದ್ದಿ ಎಂಬುದಕ್ಕೆ ನಿನ್ನ ಮನಸ್ಸೇ ಸಾಕ್ಷಿ.

¶ ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.

¶ ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,

ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.

ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು,

¶ ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ.