TSK

TSK · ರೋಮಾಪುರದವರಿಗೆ 3:11

مراجع Treasury of Scripture Knowledge في ಕನ್ನಡ IRV.

العودة إلى المقطع

ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,

ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ; ದೇವರನ್ನು ಪ್ರಾರ್ಥಿಸುವುದಿಲ್ಲ.

ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.

ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ ತಿಳಿವಳಿಕೆಯನ್ನು ಹಗೆಮಾಡಿದರು.

ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.

ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

¶ ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.

ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇದೆಲ್ಲಾ ಸಂಭವಿಸಿದರೂ ಅದು ತನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲಿಲ್ಲ; ಆತನನ್ನು ಆಶ್ರಯಿಸಲಿಲ್ಲ.

‹ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ›‹ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.›

¶ ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.

ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.