ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.
TSK
TSK · ರೋಮಾಪುರದವರಿಗೆ 3:12
مراجع Treasury of Scripture Knowledge في ಕನ್ನಡ IRV.
ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.
ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
¶ ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.
ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ಡೊಂಕು ಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವವರು ಸಮಾಧಾನವನ್ನು ಅರಿಯರು.
“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.
ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.
¶ ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.
ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.