TSK

TSK · ರೋಮಾಪುರದವರಿಗೆ 3:27

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ಈ ಒಡಂಬಡಿಕೆಯನ್ನು ನಿನ್ನೊಂದಿಗೆ ಮಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.

¶ “ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.

¶ ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.

¶ ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,

¶ ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.

ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ.

ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.

ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.

ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.

ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.

ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.