TSK

TSK · ರೋಮಾಪುರದವರಿಗೆ 3:7

مراجع Treasury of Scripture Knowledge في ಕನ್ನಡ IRV.

العودة إلى المقطع

ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

¶ ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು, “ಇಗೋ ನಾವು ನಿನಗೆ ಗುಲಾಮರು” ಎಂದರು.

¶ ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಐಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, “ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲಾ” ಎಂದುಕೊಂಡರು.

ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ, ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದು ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಉತ್ತರಕೊಟ್ಟನು.

¶ ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ಹೇಗೂ ನಿನಗೆ ವಾಸಿಯಾಗುವುದು” ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ, ಅವನು ಸತ್ತೇ ಹೋಗುವನೆಂದು ಯೆಹೋವನು ನನಗೆ ತಿಳಿಸಿದ್ದಾನೆ ಎಂದು ಹೇಳಿದನು.

ಯೇಸು ಪೇತ್ರನಿಗೆ, ‹“ನಿನಗೆ ಸತ್ಯವಾಗಿ ಹೇಳುತ್ತೇನೆ, ಇದೇ ರಾತ್ರಿಯಲ್ಲಿ ಕೋಳಿ ಕೂಗುವುದಕ್ಕಿಂತ ಮೊದಲೇ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವಿ”› ಅಂದನು.

ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.

ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.