TSK

TSK · ರೋಮಾಪುರದವರಿಗೆ 4:12

مراجع Treasury of Scripture Knowledge في ಕನ್ನಡ IRV.

العودة إلى المقطع

ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ ವಿವೇಕವು ನಿನ್ನನ್ನು ಪ್ರೇರೇಪಿಸಿ, ನೀತಿವಂತರ ದಾರಿಗಳನ್ನು ಹಿಡಿಯುವ ಹಾಗೆ ಮಾಡುವುದು.

ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.

ಅದಕ್ಕೆ ಅವರು, “ನಮ್ಮ ತಂದೆಯು ಅಬ್ರಹಾಮನೇ” ಎಂದರು. ಅದಕ್ಕೆ ಯೇಸು ಅವರಿಗೆ, ‹“ನೀವು ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದೀರಿ.›

ನಿಮ್ಮ ಬಳಿಗೆ ಹೋಗುವುದಕ್ಕೆ ನಾನು ತೀತನನ್ನು ಬೇಡಿಕೊಂಡು ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿ ಕೊಟ್ಟೆನು, ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ? ನಾವಿಬ್ಬರೂ ಒಂದೇ ಹಾದಿಯಲ್ಲಿ ನಡೆಯಲಿಲ್ಲವೋ? ನಾವು ಅದೇ ಕ್ರಮದಲ್ಲಿ ಹೆಜ್ಜೆ ಇಡಲಿಲ್ಲವೋ?

ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು.