TSK

TSK · ರೋಮಾಪುರದವರಿಗೆ 5:12

مراجع Treasury of Scripture Knowledge في ಕನ್ನಡ IRV.

العودة إلى المقطع

ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.

ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.

ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.

ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.

ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.

ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.

ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ.