ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.
TSK
TSK · ರೋಮಾಪುರದವರಿಗೆ 5:20
مراجع Treasury of Scripture Knowledge في ಕನ್ನಡ IRV.
¶ “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.
ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು.
ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.
ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.
‹ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡಿದವರು ಬಂದಾಗ, ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.›
¶ ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು.
‹ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ.›
ಯಾಕೆಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ.
ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,
¶ ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವುದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
¶ ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ.
ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.