ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
TSK
TSK · ರೋಮಾಪುರದವರಿಗೆ 6:3
مراجع Treasury of Scripture Knowledge في ಕನ್ನಡ IRV.
ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.
ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.
¶ ಸಹೋದರರೇ, ಧರ್ಮಶಾಸ್ತ್ರವನ್ನು ತಿಳಿದವರೊಂದಿಗೆ ನಾನು ಮಾತನಾಡುತ್ತಿದ್ದೇನೆ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಅವನ ಮೇಲೆ ಧರ್ಮಶಾಸ್ತ್ರವು ನಿಯಂತ್ರಣ ಸಾಧಿಸುತ್ತದೆಂಬುದು ನಿಮಗೆ ಗೊತ್ತಿಲ್ಲವೇ?
ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,
ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?
¶ ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.
¶ ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.
ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.
ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.