TSK

TSK · ರೋಮಾಪುರದವರಿಗೆ 8:26

مراجع Treasury of Scripture Knowledge في ಕನ್ನಡ IRV.

العودة إلى المقطع

ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ?

ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.

ದೇವರೇ, ನನ್ನ ಮೊರೆಯನ್ನು ಲಾಲಿಸು; ನನ್ನ ವಿಜ್ಞಾಪನೆಗೆ ಕಿವಿಮುಚ್ಚಿಕೊಳ್ಳಬೇಡ.

ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; ಆತನು ನನಗೆ ಕಿವಿಗೊಡುವನು.

ನಿಟ್ಟುಸಿರಿನಿಂದ ನನ್ನಲ್ಲಿ ಎಲುಬು, ತೊಗಲು ಮಾತ್ರ ಉಳಿದಿರುತ್ತವೆ.

ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು, ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ.

ನೀನು ನನ್ನ ಧ್ವನಿಯನ್ನು ಕೇಳಿದಿ; ನನ್ನ ನಿಟ್ಟುಸಿರಿಗೂ ಮತ್ತು ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ!

‹ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು.›

¶ ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು.

‹ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.›

ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.

ನಾವು ಈ ದೇಹದಲ್ಲಿರುವವರೆಗೆ ನರಳುತ್ತಾ; ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ದೇಹದ ಮೇಲೆ ನಾವು ಎಂದು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.

ಅವನನ್ನು ಕುರಿತಾಗಿ ನಾನು ಹೆಮ್ಮೆ ಪಡುವೆನು. ಆದರೆ ನನ್ನನ್ನು ಕುರಿತಂತೆ ನನ್ನ ಬಲಹೀನತೆಯನ್ನು ಕುರಿತಲ್ಲದೆ ಬೇರೆ ಹೊಗಳಿಕೆ ನನಗೆ ಇಲ್ಲ.

ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.

ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.

ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ.