ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
TSK
TSK · ರೋಮಾಪುರದವರಿಗೆ 8:27
مراجع Treasury of Scripture Knowledge في ಕನ್ನಡ IRV.
ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.
ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ?
ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.
ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.
ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.
ಆಗ ಆತನು ಅವರಿಗೆ ಹೇಳಿದ್ದೇನಂದರೆ, ‹“ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.›
ಯೇಸು ಮೂರನೆಯ ಸಾರಿ, ‹“ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?”› ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು ‹“ನನ್ನ ಕುರಿಗಳನ್ನು ಮೇಯಿಸು”› ಎಂದನು.
ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.
ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?
ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.
ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.
ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ದೋಷಿಗಳೆಂದು ಖಂಡಿಸಿ ನಡೆದರೆ ದೇವರ ಸನ್ನಿಧಿಯಲ್ಲಿ ನಮಗೆ ಭರವಸೆ ದೊರೆಯುತ್ತದೆ.
‹ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ›‹ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು.›‹ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.›