¶ ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”
TSK
TSK · ರೋಮಾಪುರದವರಿಗೆ 8:31
مراجع Treasury of Scripture Knowledge في ಕನ್ನಡ IRV.
¶ “ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.
ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.
ಅವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮನಾದ ಅಬ್ಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಯೆರೂಸಲೇಮಿಗೆ ಹೋದನು.
ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.
ದೇವರನ್ನು ನಂಬಿ ನಿರ್ಭಯದಿಂದಿರುವೆನು; ನರಪ್ರಾಣಿಗಳು ನನಗೆ ಏನು ಮಾಡಾರು?
ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು?
ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.
ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು. ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.
¶ ಹಾಗಾದರೆ ವಂಶಾನುಕ್ರಮವಾಗಿ ನಮಗೆ ಮೂಲಪಿತೃವಾಗಿರುವ ಅಬ್ರಹಾಮನು ಈ ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು?