TSK

TSK · ರೋಮಾಪುರದವರಿಗೆ 8:33

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.

ಅವನು ಅಧರ್ಮಿಗಳ ಜೊತೆಯಲ್ಲಿ ಸಂಚರಿಸುತ್ತಾನೆ, ಕೆಟ್ಟವರ ಸಂಗಡ ನಡೆದಾಡುತ್ತಾನೆ.

ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.

ನನ್ನ ನೀತಿ ನಿರ್ಣಯಿಸುವಾತನು ಸಮೀಪದಲ್ಲಿದ್ದಾನೆ. ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು ನ್ಯಾಯಾಸನದ ಮುಂದೆ ನಿಂತುಕೊಳ್ಳುವ. ನನಗೆ ಪ್ರತಿಕಕ್ಷಿಯು ಯಾರು? ಅವನು ನನ್ನ ಬಳಿಗೆ ಬರಲಿ.

¶ ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.

‹ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?›

¶ ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,

ದೇವರಿಂದ ಪ್ರೀತಿಸಲ್ಪಟ್ಟಿರುವ ಸಹೋದರರೇ, ಆತನು ನಿಮ್ಮನ್ನು ಆರಿಸಿಕೊಂಡನೆಂಬದನ್ನೂ ಬಲ್ಲೆವು.

ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.