ದೇವರೇ, ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ.
TSK
TSK · ರೋಮಾಪುರದವರಿಗೆ 8:36
مراجع Treasury of Scripture Knowledge في ಕನ್ನಡ IRV.
ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.
ಯೆಹೋವನೇ, ನೀನು ನನ್ನನ್ನು ತಿಳಿದಿದ್ದಿ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತಿ. ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು.
‹ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.›
ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.
ನಾವು ಸಹ ಯಾಕೆ ಪ್ರತಿ ಗಳಿಗೆಯಲ್ಲಿಯೂ ಭಯದಲ್ಲಿದ್ದೇವೆ?